ನವದೆಹಲಿ: ದೇಶದ 30 ಪ್ರಮುಖ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತೀವ್ರ ಕಲ್ಲಿದ್ದಲು ಕೊರತೆ ಎದುರಾಗಿರುವುದರಿಂದ ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ.
ಶಾಖೋತ್ಪನ್ನ ಘಟಕಗಳಲ್ಲಿ ಕನಿಷ್ಠ 15 ದಿನಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ಸಂಗ್ರಹ ಇರಬೇಕು. ಆದರೆ, ಯಾವ ಘಟಕಗಳಲ್ಲೂ ಅಷ್ಟು ಕಲ್ಲಿದ್ದಲು ಸಂಗ್ರಹ ಇಲ್ಲ. ಕಳೆದ ಕೆಲವು ತಿಂಗಳಲ್ಲಿ ಜಲವಿದ್ಯುತ್ ಮತ್ತು ಪವನ ವಿದ್ಯುತ್ ಉತ್ಪಾದನೆ ಕುಸಿದಿರುವುದರಿಂದ ತೀವ್ರ ವಿದ್ಯುತ್ ಅಭಾವ ಕಾಡುತ್ತಿದೆ.
ವಿಧಾನಸಭಾ ಚುನಾವಣೆ ನಡೆಯುತ್ತಿರುವ ರಾಜಸ್ಥಾನ, ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಎಲ್ಲ ಕಲ್ಲಿದ್ದಲು ರವಾನಿಸುತ್ತಿರುವ ಕಾರಣ ಉಳಿದ ರಾಜ್ಯಗಳಲ್ಲಿ ಕೊರತೆ ಎದುರಾಗಿದೆ ಎಂದು ಎನ್‌ಸಿಪಿ ಆರೋಪಿಸಿದೆ.
ಉಷ್ಣ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯಕ್ಕೆ ಮುಂಗಾರು ಮಳೆ ಮತ್ತು ರೈಲ್ವೆ ಇಲಾಖೆಯ ಹೆಚ್ಚಿದ ಬೇಡಿಕೆ ಕಾರಣ ಎಂದು ಕಲ್ಲಿದ್ದಲು ಸಚಿವಾಲಯ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.