
ನವದೆಹಲಿ: ದೇಶೀಯವಾಗಿ ವಿನ್ಯಾಸಗೊಳಿಸಿ ನಿರ್ಮಿಸಿರುವ ಮಾಲಿನ್ಯ ನಿಯಂತ್ರಣ ಹಡಗು ‘ಸಮುದ್ರ ಪ್ರತಾಪ್’ ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜ.5ರ ಸೋಮವಾರ ಭಾರತೀಯ ಕರಾವಳಿ ಪಡೆಗೆ ಸೇರ್ಪಡೆಗೊಳಿಸಲಿದ್ದಾರೆ.
4,200 ಟನ್ ತೂಕದ ಈ ಹಡಗು ಗಂಟೆಗೆ 22 ನಾಟಿಕಲ್ ಮೈಲು ವೇಗದಲ್ಲಿ ಚಲಿಸಲಿದ್ದು, 6 ಸಾವಿರ ನಾಟಿಕಲ್ ಮೈಲು ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. 114.5 ಮೀಟರ್ ಉದ್ದವಿದ್ದು, ಶೇ 60ರಷ್ಟು ದೇಶೀಯ ವಸ್ತುಗಳಿಂದಲೇ ನಿರ್ಮಾಣಗೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಕಡಲ ಮಾಲಿನ್ಯ ನಿಯಂತ್ರಣ ನಿಯಮಗಳು, ಕಡಲ ಕಾನೂನು ಜಾರಿ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಸೇರಿದಂತೆ ವಿಶೇಷ ಆರ್ಥಿಕ ವಲಯವನ್ನು (ಇಇಝೆಡ್) ರಕ್ಷಿಸುವಲ್ಲಿ ಈ ಹಡಗು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ.
ಕಳೆದ ಡಿಸೆಂಬರ್‌ನಲ್ಲಿ ಈ ಹಡಗನ್ನು ಕರಾವಳಿ ಪಡೆಗೆ ಗೋವಾ ಶಿಪ್ ಯಾರ್ಡ್ ಲಿಮಿಟೆಡ್‌ನಲ್ಲಿ (ಜಿಎಸ್‌ಎಲ್) ಔಪಚಾರಿಕವಾಗಿ ಹಸ್ತಾಂತರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.