ADVERTISEMENT

20 ವರ್ಷಗಳ ನಂತರ ಅಪರಾಧಿ ಬಂಧನ

1998ರ ಕೊಯಮತ್ತೂರು ಸ್ಫೋಟ ಪ್ರಕರಣ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2018, 13:54 IST
Last Updated 11 ಸೆಪ್ಟೆಂಬರ್ 2018, 13:54 IST

ಚೆನ್ನೈ (ಪಿಟಿಐ):1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಹಿಂದೆ ತಪ್ಪಿಸಿಕೊಂಡಿದ್ದ ಅಪರಾಧಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

20 ವರ್ಷಗಳ ಹಿಂದೆ ಕಾಣೆಯಾಗಿದ್ದ ಎನ್.ಪಿ. ನೂಹು ಅಲಿಯಾಸ್‌ ಮಂಕಾವು ರಶೀದ್‌ನನ್ನು ಕೇರಳದ ಕೊಯಿಕ್ಕೋಡ್‌ನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟದಲ್ಲಿ 58 ಜನ ಸಾವಿಗೀಡಾಗಿದ್ದರೆ, 200 ಜನ ಗಾಯಗೊಂಡಿದ್ದರು. ಪ್ರಕರಣದಲ್ಲಿ ನೂಹು ಅಪರಾಧಿ ಎಂದು ನ್ಯಾಯಾಲಯ ಘೋಷಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.