ADVERTISEMENT

ಅತ್ಯಾಚಾರ: ಮರಣದಂಡನೆ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 17:25 IST
Last Updated 7 ನವೆಂಬರ್ 2019, 17:25 IST

ನವದೆಹಲಿ: ಹತ್ತು ವರ್ಷ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಬಾಲಕಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಕೊಯಮತ್ತೂರಿನ ಪ್ರಕರಣದಲ್ಲಿ ಅಪರಾಧಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯ ತೀರ್ಪು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಅಪರಾಧಿ ಮನೋಹರನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಎಫ್‌.ನಾರಿಮನ್‌ ನೇತೃತ್ವದ ತ್ರಿಸದಸ್ಯ ಪೀಠವು 2:1 ಮತದ ಆಧಾರದಲ್ಲಿ ತಳ್ಳಿಹಾಕಿತು. ‘ತೀರ್ಪು ಮರುಪರಿಶೀಲಿಸಲು ಯಾವುದೇ ಆಧಾರಗಳಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.

ನ್ಯಾಯಮೂರ್ತಿಗಳಾದ ನಾರಿಮನ್‌ ಮತ್ತು ಸೂರ್ಯಕಾಂತ್‌ ಅವರು ಮರುಪರಿಶೀಲನೆ ಮನವಿಯನ್ನು ತಳ್ಳಿಹಾಕಿದರೆ, ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, ‘ಶಿಕ್ಷೆಯ ಸ್ವರೂಪ ಕುರಿತು ನನಗೆ ಭಿನ್ನ ಅಭಿಪ್ರಾಯವಿದೆ’ ಎಂದು ಹೇಳಿದರು.

ADVERTISEMENT

ಬಹುಮತದ ಆಧಾರದಲ್ಲಿ ಮರುಪರಿಶೀಲನೆ ಕೋರಿದ್ದ ಅರ್ಜಿಯನ್ನು ಸಾರಾಸಗಟಾಗಿ ತಳ್ಳಿಹಾಕಲಾಗಿದೆ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.