ADVERTISEMENT

ಕೊಯಮತ್ತೂರು ವಿಮಾನ ನಿಲ್ದಾಣ ಬಳಿ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪಿಟಿಐ
Published 4 ನವೆಂಬರ್ 2025, 7:22 IST
Last Updated 4 ನವೆಂಬರ್ 2025, 7:22 IST
<div class="paragraphs"><p>ಸಾಮೂಹಿಕ ಅತ್ಯಾಚಾರ</p></div>

ಸಾಮೂಹಿಕ ಅತ್ಯಾಚಾರ

   

ಕೊಯಮತ್ತೂರು: ಕಾರಿನಲ್ಲಿ ಸ್ನೇಹಿತನೊಂದಿಗೆ ತೆರಳುತ್ತಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 2 ಭಾನುವಾರ ರಾತ್ರಿ ಕೊಯಮತ್ತೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ವೆಲ್ಲಿಕಿನಾರು ಎಂಬಲ್ಲಿ ಘಟನೆ ನಡೆದಿತ್ತು.

ADVERTISEMENT

ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಇದೇ ಪ್ರದೇಶದಲ್ಲಿ ಅಡಗಿ ಕೂತಿದ್ದ ಗುಣ, ಸತೀಶ, ಕಾರ್ತಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು, ಅವರ ಕಾಲಿಗೆ ಗುಂಡು ಹೊಡೆದಿದ್ದಾರೆ.

ಆರೋಪಿಗಳನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಯಮತ್ತೂರು ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಗೆಳೆಯನ ಜೊತೆ ಭಾನುವಾರ ಸಂಜೆ ಕಾರಿನಲ್ಲಿ ಸುತ್ತಾಡಲು ತೆರಳಿದ್ದರು. ಈ ವೇಳೆ ವೆಲ್ಲಿಕಿನಾರು ಬಳಿ ಟಂಟಂ ಆಟೊದಲ್ಲಿ ಬಂದಿದ್ದ ಆರೋಪಿಗಳು ಕಾರಿನ ಕಿಟಕಿ ಒಡೆದು ಯುವಕನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಘಟನೆ ನಡೆದ ನಂತರ ಸ್ಥಳೀಯರ ನೆರವಿನಿಂದ ಯುವತಿ ಹಾಗೂ ಆಕೆಯ ಗೆಳೆಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.