ಸಾಂದರ್ಭಿಕ ಚಿತ್ರ
ಚೆನ್ನೈ: ಮಾನಸಿಕ ಅಸ್ವಸ್ಥೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆರೋಪಿಗಳನ್ನು ಕಾಲೇಜು ವಿದ್ಯಾರ್ಥಿಗಳಾದ ಸುರೇಶ್(20) ಹಾಗೂ ನರೇಶ್(19) ಎಂದು ಗುರುತಿಸಲಾಗಿದೆ.
ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆಕೆಯ ಸ್ನೇಹಿತರನ್ನು ವಿಚಾರಣೆ ನಡೆಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಶಂಕಿತ ವ್ಯಕ್ತಿಗಳ ವಿರುದ್ಧ ಸಂಬಂಧಿತ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ವಿಸ್ತೃತ ತನಿಖೆ ನಡೆಸುವುದು ತನಿಖಾಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ. ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಸಾರ್ವಜನಿಕರು ಯಾವುದೇ ರೀತಿ ಪ್ರತಿಕ್ರಿಯಿಸಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಇದರಿಂದ ತನಿಖೆಗೆ ಅಡ್ಡಿಯಾಗುವುದಲ್ಲದೆ ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ಮಾನಸಿಕ ಯಾತನೆ ಉಂಟಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.