ADVERTISEMENT

ಮಹಾರಾಷ್ಟ್ರದಾದ್ಯಂತ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಭೌತಿಕ ತರಗತಿಗಳು ಆರಂಭ

ಪಿಟಿಐ
Published 20 ಅಕ್ಟೋಬರ್ 2021, 11:19 IST
Last Updated 20 ಅಕ್ಟೋಬರ್ 2021, 11:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಮಹಾರಾಷ್ಟ್ರ ರಾಜ್ಯದಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸ್ಥಗಿತಗೊಂಡಿದ್ದ ಭೌತಿಕ ತರಗತಿಗಳು ಬುಧವಾರದಿಂದ ಪುನರಾರಂಭಗೊಂಡಿವೆ.

ಎಲ್ಲಾ ಕೃಷಿಯೇತರ ಕಾಲೇಜುಗಳು, ಸರ್ಕಾರಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು, ಸ್ವ-ಹಣಕಾಸು ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಬುಧವಾರದಿಂದ ಭೌತಿಕ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ.

ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ, ಎರಡೂ ಡೋಸ್‌ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಅವಕಾಶವಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಆನ್‌ಲೈನ್ ಮೂಲಕ ನಡೆಯುವ ತರಗತಿಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಕಾಲೇಜುಗಳು ಆನ್‌ಲೈನ್ ತರಗತಿಗಳನ್ನು ಮುಂದುವರಿಸುತ್ತಿವೆ.

ADVERTISEMENT

ಮಹಾರಾಷ್ಟ್ರದಲ್ಲಿ 5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅ. 4 ರಿಂದ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಈಗ ಕಾಲೇಜು–ವಿಶ್ವವಿದ್ಯಾಲಯಗಳಿಗೂ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.