ADVERTISEMENT

ಕೊಲಿಜಿಯಂ ವ್ಯವಸ್ಥೆ ಬಹುತೇಕ ಪರಿಪೂರ್ಣ ಮಾದರಿ: ನ್ಯಾ.ಲಲಿತ್‌

ಪಿಟಿಐ
Published 18 ಫೆಬ್ರುವರಿ 2023, 14:07 IST
Last Updated 18 ಫೆಬ್ರುವರಿ 2023, 14:07 IST
ಯು.ಯು.ಲಲಿತ್‌
ಯು.ಯು.ಲಲಿತ್‌   

ನವದೆಹಲಿ: ನ್ಯಾಯಮೂರ್ತಿಗಳ ಆಯ್ಕೆಗಿರುವ ಕೊಲಿಜಿಯಂ ವ್ಯವಸ್ಥೆಯು ಬಹುತೇಕ ಪರಿಪೂರ್ಣ ಮಾದರಿಯಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್‌ ಶನಿವಾರ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಂಗ ಉತ್ತರದಾಯಿತ್ವ ಮತ್ತು ಸುಧಾರಣೆ (ಸಿಜೆಎಆರ್‌) ಸಂಸ್ಥೆ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಂವಿಧಾನಿಕ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳ ಹೆಸರುಗಳನ್ನು ಶಿಫಾರಸು ಮಾಡುವಾಗ ಕಠಿಣ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತಿದೆ ಎಂದಿದ್ದಾರೆ.

‘ನನ್ನ ಪ್ರಕಾರ ಕೊಲಿಜಿಯಂಗಿಂತ ಉತ್ತಮವಾದ ಬೇರೆ ವ್ಯವಸ್ಥೆ ನಮ್ಮಲ್ಲಿಲ್ಲ. ಈ ಕಾರಣಕ್ಕೆ ನಾವು ಕೊಲಿಜಿಯಂ ವ್ಯವಸ್ಥೆಯು ಉಳಿಯುವಂತೆ ಮಾಡಬೇಕು’ ಎಂದೂ ತಿಳಿಸಿದ್ದಾರೆ.

ADVERTISEMENT

ಕೊಲಿಜಿಯಂ ವ್ಯವಸ್ಥೆಯು ನ್ಯಾಯಾಂಗ ಮತ್ತು ಸರ್ಕಾರದ ನಡುವಿನ ವಿವಾದದ ಪ್ರಮುಖ ಕೇಂದ್ರಬಿಂದುವಾಗಿ ಬದಲಾಗಿದೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.