ADVERTISEMENT

ಉಗ್ರರೊಂದಿಗೆ ಕಾಳಗ: ಮೇಜರ್‌, ಪೊಲೀಸ್‌ ಅಧಿಕಾರಿ ಸೇರಿ ಐವರು ಹುತಾತ್ಮ

​ಪ್ರಜಾವಾಣಿ ವಾರ್ತೆ
Published 3 ಮೇ 2020, 4:52 IST
Last Updated 3 ಮೇ 2020, 4:52 IST
ಕಾರ್ಯಚರಣೆಯಲ್ಲಿ ತೊಡಗಿರುವ ಭಾರತೀಯ ಸೇನಾ ಪಡೆಗಳ ಸಾಂದರ್ಭಿಕ ಚಿತ್ರ
ಕಾರ್ಯಚರಣೆಯಲ್ಲಿ ತೊಡಗಿರುವ ಭಾರತೀಯ ಸೇನಾ ಪಡೆಗಳ ಸಾಂದರ್ಭಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರದಲ್ಲಿ ಭಾರತೀಯ ಸೇನಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನೆಯ ಹಿರಿಯ ಅಧಿಕಾರಿ, ಮೇಜರ್‌, ಪೊಲೀಸ್‌ ಅಧಿಕಾರಿಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಮಡಿದಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾಧಿಕಾರಿಗಳಾದ ಅಶುತೋಷ್ ಶರ್ಮಾ, ಮೇಜರ್ ಅನುಜ್, ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಕೀಲ್ ಖಾಜಿ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾದ ಚಂಜ್‌ಮುಲ್ಲಾ ಪ್ರದೇಶದ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಕೆಲ ನಾಗರಿಕರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದರು. ನಾಗರಿಕರನ್ನು ರಕ್ಷಿಸಲು ಕರ್ನಲ್‌ ಶರ್ಮಾ ಭದ್ರತಾ ಪಡೆಯನ್ನು ಮುನ್ನಡೆಸುತ್ತಿದ್ದರು ಎನ್ನಲಾಗಿದೆ.

ADVERTISEMENT

ಒತ್ತೆಯಾಳುಗಳನ್ನು ರಕ್ಷಿಸಿದ ನಂತರ ಲ್ಯಾನ್ಸ್ ನಾಯಕ್ ಮತ್ತು ರೈಫಲ್‌ಮೆನ್‌ ಇಬ್ಬರು ಭಾರೀ ಬೆಂಕಿಗೆ ಆಹುತಿಯಾಗಿದ್ದಾರೆ.
ಇದೇ ವೇಳೆ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.