ADVERTISEMENT

ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: ತನಿಖೆಗೆ ಏಕಸದಸ್ಯ ಆಯೋಗ ರಚನೆ

ಪಿಟಿಐ
Published 7 ಅಕ್ಟೋಬರ್ 2021, 6:30 IST
Last Updated 7 ಅಕ್ಟೋಬರ್ 2021, 6:30 IST
ಲಖಿಂಪುರ ಹಿಂಸಾಚಾರ (ಪಿಟಿಐ ಚಿತ್ರ)
ಲಖಿಂಪುರ ಹಿಂಸಾಚಾರ (ಪಿಟಿಐ ಚಿತ್ರ)   

ಲಖನೌ: ಲಖಿಂಪುರ– ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಉತ್ತರ ಪ್ರದೇಶದ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪ್ರದೀಪ್‌ ಕುಮಾರ್‌ ಶ್ರೀವಾಸ್ತವ ಅವರ ನೇತೃತ್ವದ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯಪಾಲರು ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ. ವಿಚಾರಣೆ ನಡೆಸಲು ಆಯೋಗಕ್ಕೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಆಯೋಗದ ಕಚೇರಿಯು ಲಖಿಂಪುರ– ಖೇರಿಯಲ್ಲಿ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‌ಲಖಿಂಪುರ–ಖೇರಿಯಲ್ಲಿ ಭಾನವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದರು. ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿದಿದ್ದವು. ಈ ವೇಳೆ ನಾಲ್ವರು ರೈತರು ಬಲಿಯಾಗಿದ್ದರು. ಆಕ್ರೋಶಗೊಂಡ ರೈತರು ಎರಡೂ ಎಸ್‌ಯುವಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಈ ಎಸ್‌ಯುವಿಗಳಲ್ಲಿ ಇದ್ದವರಲ್ಲಿ ನಾಲ್ವರು ಮೃತಪಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.