ಅಲಿಗಢ (ಉತ್ತರ ಪ್ರದೇಶ): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಒವೈಸಿ ಅವರ ವಿರುದ್ಧ ದೂರು ದಾಖಲಾಗಿದೆ.
ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣದಾಖಲಿಸಲಾಗಿದೆ.
ಪ್ರದೀಪ್ ಗುಪ್ತ ಎಂಬ ವಕೀಲರೊಬ್ಬರು ಈ ಪ್ರಕರಣದಾಖಲಿಸಿದ್ದು, ಪತ್ರಕರ್ತ ರವೀಶ್ ಕುಮಾರ್ ಅವರ ವಿರುದ್ಧವೂ ದೂರಿದ್ದಾರೆ. ನ್ಯಾಯಾಲಯವು ಅರ್ಜಿಯನ್ನು ಮಾನ್ಯ ಮಾಡಿದ್ದು, ಜನವರಿ 24ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ರಾಜಕೀಯ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಅಸಾದುದ್ದೀನ್ ಒವೈಸಿ ಮತ್ತು ಪತ್ರಕರ್ತರ ರವೀಶ್ ಕುಮಾರ್ ಅವರು ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.