ADVERTISEMENT

ಬಿಹಾರಿಗಳಿಗೆ ಅವಮಾನ ಆರೋಪ: ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ದೂರು

ಏಜೆನ್ಸೀಸ್
Published 1 ಏಪ್ರಿಲ್ 2021, 13:43 IST
Last Updated 1 ಏಪ್ರಿಲ್ 2021, 13:43 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಪಟ್ನಾ: ಪಶ್ಚಿಮ ಬಂಗಾಳಕ್ಕೆ ಬಿಹಾರದಿಂದ ಗೂಂಡಾಗಳನ್ನು ಕರೆತರಲಾಗುತ್ತಿದೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಹಾರದಲ್ಲಿ ಗುರುವಾರ ದೂರು ದಾಖಲಾಗಿದೆ.

ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬಿಹಾರದ ಜನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಮಮತಾ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಿಹಾರದ ಮುಜಪ್ಫರಪುರದ ಸ್ಥಳೀಯ ವಕೀಲರಾದ ಸುಧೀರ್ ಕುಮಾರ್ ಓಜಾ ಎಂಬುವವರು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಈ ದೂರನ್ನು ನೀಡಿದ್ದಾರೆ.

ADVERTISEMENT

'ಮತದಾರರನ್ನು ಬೆದರಿಸುವುದಕ್ಕಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಗೂಂಡಾಗಳು ನಂದಿಗ್ರಾಮವನ್ನು ಪ್ರವೇಶಿಸಿದ್ದಾರೆ. ಅವರು ಕ್ಷೇತ್ರದ ಬಲರಾಂಪುರ ಮತ್ತು ಇತರ ಪ್ರದೇಶಗಳ ಗ್ರಾಮಸ್ಥರನ್ನು ಬೆದರಿಸಿ, ಗ್ರಾಮದಿಂದ ಹೊರ ಹೋಗುವಂತೆ ಒತ್ತಾಯಿಸುತ್ತಿದ್ದಾರೆ‘ ಎಂದು ಮಮತಾ ಆರೋಪಿಸಿದ್ದರು.

‘ಈ ಬೆಳವಣಿಗೆ ಕುರಿತು ಕೇಂದ್ರ ಚುನಾವಣಾ ಆಯುಕ್ತರಿಗೆ ದೂರು ನೀಡುತ್ತೇನೆ. ಚುನಾವಣಾ ಆಯೋಗ ಈ ವಿದ್ಯಮಾನ ಗಮನಿಸಿ, ಕ್ರಮ ತೆಗೆದುಕೊಳ್ಳಬೇಕು‘ ಎಂದು ಅವರು ಒತ್ತಾಯಿಸಿದ್ದರು.

ಪಶ್ಚಿಮ ಬಂಗಾಳ ವಿಧಾನಸಭೆಗೆ ಎರಡನೇ ಹಂತದ ಚುನಾವಣೆಗಳು ಇಂದು (ಗುರುವಾರ) ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಇಂದು ಮತದಾನಕ್ಕೆ ಒಳಗಾಗಿರುವ 30 ಕ್ಷೇತ್ರಗಳಲ್ಲಿ ನಂದಿಗ್ರಾಮವು ಭಾರಿ ಕುತೂಹಲ ಕೆರಳಿಸಿದ್ದ ಕ್ಷೇತ್ರವಾಗಿದೆ. ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಹಾಗೂ ಒಂದುಕಾಲದಲ್ಲಿ ಅವರ ಆತ್ಮೀಯರೆನಿಸಿಕೊಂಡಿದ್ದ ಸುವೇಂದು ಅಧಿಕಾರಿ ಕಣದಲ್ಲಿದ್ದರು. ಈ ಕ್ಷೇತ್ರದ ಎಲ್ಲಾ ಮತಗಟ್ಟೆಗಳನ್ನೂ ಸೂಕ್ಷ್ಮ ಮತಗಟ್ಟೆಗಳೆಂದು ಚುನಾವಣಾ ಆಯೋಗ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.