ADVERTISEMENT

ಅಮೇಥಿಯಲ್ಲಿ ರಾಹುಲ್‌ಗೆ ಎದುರಾಳಿಯಾಗಿ ಕಾಂಗ್ರೆಸ್ ಮುಖಂಡನ ಪುತ್ರ

ಏಜೆನ್ಸೀಸ್
Published 26 ಮಾರ್ಚ್ 2019, 6:41 IST
Last Updated 26 ಮಾರ್ಚ್ 2019, 6:41 IST
   

ಅಮೇಥಿ: ಕಾಂಗ್ರೆಸ್ ಅಧ್ಯಕ್ಷರಾಹುಲ್ ಗಾಂಧಿಗೆ ಎದುರಾಳಿಯಾಗಿಕಾಂಗ್ರೆಸ್ ಮುಖಂಡನ ಪುತ್ರನೇ ಇಲ್ಲಿ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.

ಹಜಿ ಹರೂನ್ ರಶೀದ್ ಎಂಬಾತನೇ ರಾಹುಲ್ ಎದುರಾಳಿ. ಈತ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಆಪ್ತರಾಗಿದ್ದ ಕಾಂಗ್ರೆಸ್ ಮುಖಂಡಹಜಿ ಸುಲ್ತಾನ್‌ ಖಾನ್ ಅವರ ಮಗ.

ಈ ವೇಳೆ ಮಾತನಾಡಿದ ರಶೀದ್, ಕಾಂಗ್ರೆಸ್ ಸುಮಾರು ವರ್ಷಗಳಿಂದ ಸ್ಥಳೀಯ ನಾಯಕತ್ವದ ಬಗ್ಗೆ ನಿರ್ಲಕ್ಷ್ಯ ತೋರಿದೆ. ಇದು ಇಲ್ಲಿನ ಸ್ಥಳೀಯ ಹಾಗೂ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು.

ADVERTISEMENT

ಈ ಲೋಕಸಭಾ ಕ್ಷೇತ್ರದಲ್ಲಿ 6.5 ಲಕ್ಷ ಮುಸ್ಲಿಂ ಮತದಾರರಿದ್ದು, ಕಾಂಗ್ರೆಸ್ ವಿರುದ್ಧ ಮತಚಲಾವಣೆ ಮಾಡಲು ನಿರ್ಧರಿಸಿರುವುದಾಗಿಯೂ ತಿಳಿಸಿದರು.

ಅಮೇಥಿಯಲ್ಲಿ ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಹಾಗೂ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.