
ಪಿಟಿಐ
ನವದೆಹಲಿ: ನೈರುತ್ಯ ಮುಂಗಾರು ಕೇರಳಕ್ಕೆ ಗುರುವಾರ ಪ್ರವೇಶಿಸಲಿದ್ದು, ಅದಕ್ಕೀಗ ವಾತಾವರಣ ಪಕ್ವಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಸಾಮಾನ್ಯವಾಗಿ ಕೇರಳಕ್ಕೆ ಜೂನ್ 1ರಂದು ಮುಂಗಾರು ಮಳೆ ಪ್ರವೇಶಿಸುತ್ತಿತ್ತು.
ಉಪಗ್ರಹ ಚಿತ್ರಗಳ ಪ್ರಕಾರ, ಕೇರಳ ಕರಾವಳಿ ಮತ್ತು ಪಕ್ಕದ ಅರಬ್ಬಿ ಸಮುದ್ರದ ಆಗ್ನೇಯ ದಿಕ್ಕಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಇದರಿಂದ ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
‘ಈ ವರ್ಷ ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, 4 ದಿನ ವ್ಯತ್ಯಾಸವೂ ಆಗಬಹುದು’ ಎಂದು ಇಲಾಖೆ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.