ADVERTISEMENT

ದೆಹಲಿ ಅಭಿವೃದ್ಧಿಗಾಗಿ ರೇಖಾ ಗುಪ್ತಾ ಮತ್ತಷ್ಟು ಉತ್ಸಾಹದಿಂದ ಕೆಲಸ: ಪ್ರಧಾನಿ ಮೋದಿ

ಪಿಟಿಐ
Published 20 ಫೆಬ್ರುವರಿ 2025, 9:15 IST
Last Updated 20 ಫೆಬ್ರುವರಿ 2025, 9:15 IST
<div class="paragraphs"><p>ನರೇಂದ್ರ ಮೋದಿ, ರೇಖಾ ಗುಪ್ತಾ</p></div>

ನರೇಂದ್ರ ಮೋದಿ, ರೇಖಾ ಗುಪ್ತಾ

   

(ಪಿಟಿಐ ಚಿತ್ರ)

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿರುವ ರೇಖಾ ಗುಪ್ತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ಅಭಿವೃದ್ಧಿ ಕಾರ್ಯಗಳಿಗಾಗಿ ರೇಖಾ ಗುಪ್ತಾ ಹೆಚ್ಚು ಉತ್ಸಾಹಭರಿತರಾಗಿ ಕೆಲಸ ಮಾಡುವ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ತಳಮಟ್ಟದಿಂದಲೇ ಬೆಳೆದು ಬಂದಿರುವ ನಾಯಕಿ ರೇಖಾ ಗುಪ್ತಾ, ಕಾಲೇಜು ರಾಜಕೀಯ, ರಾಜ್ಯ ಸಂಘಟನೆ, ಪುರಸಭೆ ಆಡಳಿತ ಮತ್ತು ಈಗ ಶಾಸಕಿಯಾಗಿ ಮುಖ್ಯಮಂತ್ರಿ ಹುದ್ದೆಗೇರಿದ್ದಾರೆ ಎಂದು ಪ್ರಧಾನಿ ಮೋದಿ ಪ್ರಶಂಸಿಸಿದ್ದಾರೆ.

ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನರೇಂದ್ರ ಮೋದಿ ಹಾಜರಿದ್ದರು. ಪಕ್ಷದ ವರಿಷ್ಠರು ಹಾಗೂ ಬಿಜೆಪಿ ಆಡಳಿತದಲ್ಲಿರುವ ನಾಯಕರು ಉಪಸ್ಥಿತರಿದ್ದರು.

ರೇಖಾ ಗುಪ್ತಾ, ದೆಹಲಿ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎಎಪಿ 22 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನ ದೊರಕಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.