ADVERTISEMENT

ಭಾರತದಲ್ಲಿ 500ರ ಗಡಿ ದಾಟಿದ ಕೊರೊನಾವೈರಸ್‌ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 14:42 IST
Last Updated 24 ಮಾರ್ಚ್ 2020, 14:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವವರ ಸಂಖ್ಯೆ ಮಂಗಳವಾರ 519ಕ್ಕೆ ಮುಟ್ಟಿದೆ.

ಸಂಜೆ 5.45ಕ್ಕೆ ನೀಡಿರುವ ಮಾಹಿತಿ ಪ್ರಕಾರ ದೇಶದ ವಿವಿಧೆಡೆ ಕೋವಿಡ್-19 ಪ್ರಕರಣಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 470. ವಿವಿಧೆಡೆ ದಾಖಲಾಗಿದ್ದ 40 ಮಂದಿ ಗುಣಮುಖರಾಗಿ ಡಿಸ್‌ಚಾರ್ಜ್‌ ಆಗಿದ್ದಾರೆ.

ಸೋಂಕಿತರ ಪೈಕಿ 43 ವಿದೇಶಿಯರು ಸೇರಿದ್ದಾರೆ. ಈವರೆಗೆ ಕೊರೊನಾ ವೈರಸ್ ಸೋಂಕಿನಿಂದ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಸೋಮವಾರ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರ (ಇಬ್ಬರು), ಬಿಹಾರ, ಕರ್ನಾಟಕ, ದೆಹಲಿ, ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಕೋವಿಡ್-19 ಸಾವುಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.