ಲಖನೌ: ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಮತ್ತು ಅವರ ಮರಣದ ನಂತರವು ಅವರನ್ನು, ಅವರ ನೀತಿಗಳನ್ನು ನಿರಂತರವಾಗಿ ಅಗೌರವಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಮಂಗಳವಾರ ಆರೋಪಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾಯಾವತಿ, ಅಂಬೇಡ್ಕರ್ ಅವರು ಲಕ್ಷಾಂತರ ಶೋಷಿತ ಮತ್ತು ತುಳಿತಕ್ಕೊಳಗಾದ ದಲಿತರು, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಪ್ರತಿಹಂತದಲ್ಲಿಯೂ ಕಾಂಗ್ರೆಸ್ ತಿರಸ್ಕರಿಸಿದೆ ಎಂದು ಕುಟುಕಿದ್ದಾರೆ.
ಕಾಂಗ್ರೆಸ್‌ನವರು 'ಜೈ ಬಾಪು, ಜೈ ಭೀಮ್, ಜೈ ಮಂಡಲ್, ಜೈ ಸಂವಿಧಾನ' ಹೆಸರಿನಲ್ಲಿ ಸಂಪೂರ್ಣವಾಗಿ ರಾಜಕೀಯ ಮತ್ತು ಚುನಾವಣಾ ಲಾಭಕ್ಕಾಗಿ ಎಷ್ಟೇ ಕಾರ್ಯಕ್ರಮಗಳನ್ನು ಆಯೋಜಿಸಿದರೂ, ಬಾಬಾ ಸಾಹೇಬರ ಅನುಯಾಯಿಗಳು ನಿಮ್ಮ ಹೇಳಿಕೆಗಳಿಂದ ದಾರಿ ತಪ್ಪುವುದಿಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಕೇವಲ ರಾಜಕೀಯ ಲಾಭಕ್ಕಾಗಿ ಹಾಗೂ ತಮ್ಮ ಸ್ವಾರ್ಥಕ್ಕಾಗಿ ಕೆಲವರು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಾರೆ. ಈ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕೆಂದು ಮಾಯಾವತಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.