ADVERTISEMENT

ಖಜುರಾಹೊ: ಎಐಎಫ್‌ಬಿ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ

ಪಿಟಿಐ
Published 15 ಏಪ್ರಿಲ್ 2024, 13:55 IST
Last Updated 15 ಏಪ್ರಿಲ್ 2024, 13:55 IST
..
..   

ನವದೆಹಲಿ: ಖಜುರಾಹೊ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ ಕಾಂಗ್ರೆಸ್ ಪಕ್ಷವು ‘ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್’ (ಎಐಎಫ್‌ಬಿ) ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದು, ಅವರು ‘ಇಂಡಿಯಾ’ ಕೂಟದ ಜಂಟಿ ಅಭ್ಯರ್ಥಿಯಾಗಲಿದ್ದಾರೆ ಎಂದು ಸೋಮವಾರ ತಿಳಿಸಿದೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದ್ದು, ‘ಇಂಡಿಯಾ’ ಕೂಟದ ಸ್ಥಾನ ಹಂಚಿಕೆ ಸೂತ್ರಕ್ಕೆ ಅನುಸಾರವಾಗಿ ಖಜುರಾಹೊ ಕ್ಷೇತ್ರವನ್ನು ಮಿತ್ರಪಕ್ಷವಾದ ಎಸ್‌ಪಿಗೆ ಬಿಟ್ಟುಕೊಟ್ಟಿತ್ತು. ಏಪ್ರಿಲ್ 5ರಂದು ಎಸ್‌ಪಿ ಅಭ್ಯರ್ಥಿ ಮೀರಾ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. 

ಈ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಬಿಜೆಪಿ ತನ್ನ ಅಧಿಕಾರ ಬಳಸಿಕೊಂಡು ಪ್ರಜಾಪ್ರಭುತ್ವದ ನಿಯಮಗಳಿಗೆ ವಿರುದ್ಧವಾಗಿ ಎಸ್‌ಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಳ್ಳುವಂತೆ ಮಾಡಿತ್ತು’ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.