ಲಖನೌ: ‘ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ‘ಬಿ ಟೀಂ’ ಆಗಿ ಕಾಂಗ್ರೆಸ್ ಕೆಲಸ ಮಾಡಿದೆ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಟೀಕಿಸಿದರು.
‘ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದ ಜೊತೆ ಬಿಎಸ್‌ಪಿ ಭಾಗಿಯಾಗದಿರುವುದು ನಿರಾಶೆ ಉಂಟುಮಾಡಿದೆ. ಮೂರು ಪಕ್ಷಗಳು ಒಗ್ಗಟ್ಟಾಗಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ’ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಮಾಯಾವತಿ ತಿರುಗೇಟು ನೀಡಿದ್ದಾರೆ.
‘ಕಾಂಗ್ರೆಸ್ ‘ಬಿ ಟೀಂ’ ಆಗಿ ಕೆಲಸ ಮಾಡಿದ್ದರಿಂದ ದೆಹಲಿಯಲ್ಲಿ ಬಜೆಪಿ ಅಧಿಕಾರಕ್ಕೆ ಬಂದಿದೆ. ಇಲ್ಲದಿದ್ದರೆ ಕಾಂಗ್ರೆಸ್‌ನ ಬಹುತೇಕ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುವಂತ ದುಃಸ್ಥಿತಿ ಬರುತ್ತಿರಲಿಲ್ಲ’ ಎಂದು ಮಯಾವತಿ ‘ಎಕ್ಸ್’ನಲ್ಲಿ ಟೀಕಿಸಿದ್ದಾರೆ.
‘ಕಾಂಗ್ರೆಸ್ ನಾಯಕರು ಇತರರನ್ನು ಬೊಟ್ಟು ಮಾಡಿ ತೋರಿಸುವ ಮೊದಲು, ತಮ್ಮ ಆಂತರಿಕ ವಿಚಾರಗಳ ಬಗ್ಗೆ ಅರಿತುಕೊಳ್ಳಬೇಕು’ ಎಂದು ಸಲಹೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.