ADVERTISEMENT

ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾಗೆ ಕೋವಿಡ್-19 ಸೋಂಕು ದೃಢ

ಏಜೆನ್ಸೀಸ್
Published 6 ಸೆಪ್ಟೆಂಬರ್ 2020, 11:09 IST
Last Updated 6 ಸೆಪ್ಟೆಂಬರ್ 2020, 11:09 IST
ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ
ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ   

ನವದೆಹಲಿ: ಹರಿಯಾಣದ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಕೂಡಲೇ ಕ್ವಾರಂಟೈನ್ ಆಗಿ ಮತ್ತು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟಿಸಿದ್ದಾರೆ.

'ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸೂಚನೆಯಂತೆ ಉಳಿದ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲಾಗುತ್ತಿದೆ. ನಿಮ್ಮ ಆಶೀರ್ವಾದದಿಂದಾಗಿ ನಾನು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಕಳೆದ ಐದು ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ಅವರು ಕೂಡಲೇ ಪ್ರತ್ಯೇಕವಾಗಿರಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.