ADVERTISEMENT

ಸಿಧುಗೆ ಅನಾರೋಗ್ಯ: ಚಂಡೀಗಡದ ಪಿಜಿಐಎಂಇಆರ್ ಆಸ್ಪತ್ರೆಗೆ ದಾಖಲು

ಪಿಟಿಐ
Published 6 ಜೂನ್ 2022, 14:31 IST
Last Updated 6 ಜೂನ್ 2022, 14:31 IST
ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು   

ಚಂಡೀಗಡ/ಪಟಿಯಾಲ(ಪಿಟಿಐ): 34 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಟಿಯಾಲ ಕೇಂದ್ರೀಯ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು, ಸೋಮವಾರ ಮಧ್ಯಾಹ್ನ ಚಂಡೀಗಡದ ‘ಪಿಜಿಐಎಂಇಆರ್’ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಧು ಅವರನ್ನು ಬಿಗಿ ಭದ್ರತೆಯಲ್ಲಿ ಪಟಿಯಾಲ ಕಾರಾಗೃಹದಿಂದ ಪಿಜಿಐಎಂಇಆರ್ ಆಸ್ಪತ್ರೆಗೆ ಕರೆತರಲಾಯಿತು. ಆರೋಗ್ಯ ಪರೀಕ್ಷೆ ಬಳಿಕ ಅವರನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಅವರನ್ನು ಮತ್ತಷ್ಟು ಆರೋಗ್ಯ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

1988ರಲ್ಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅದರಂತೆ ಮೇ 20ರಂದು ಸ್ಥಳೀಯ ನ್ಯಾಯಾಲಯಕ್ಕೆ ಶರಣಾದ ಅವರನ್ನು ಪಟಿಯಾಲ ಕಾರಾಗೃಹದಲ್ಲಿಡಲಾಗಿದೆ. 2 ವಾರಗಳ ಹಿಂದಷ್ಟೇ ಅವರಿಗೆ ಪಟಿಯಾಲದಲ್ಲಿರುವ ರಾಜೀಂದ್ರ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.