ADVERTISEMENT

ಪ್ರಧಾನಿ ಮೋದಿ ಅವಮಾನಿಸಿದ ಆರೋಪ: ಕಾಂಗ್ರೆಸ್‌ ನಾಯಕ ಪವನ್ ಖೇರಾ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2023, 10:19 IST
Last Updated 23 ಫೆಬ್ರುವರಿ 2023, 10:19 IST
 ಪವನ್ ಖೇರಾ
ಪವನ್ ಖೇರಾ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಬಂಧಿಸಿದ್ದಾರೆ.

ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನಕ್ಕಾಗಿ ರಾಯಪುರಕ್ಕೆ ತೆರಳುತ್ತಿದ್ದ ಅವರನ್ನು ವಿಮಾನದಿಂದ ಪೊಲೀಸರು ಕೆಳಗೆ ಇಳಿಸಿದರು. ಬಳಿಕ ಅಸ್ಸಾಂ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲೇ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಅಸ್ಸಾಂ ಪೊಲೀಸರ ಕೋರಿಕೆಯ ಮೇರೆಗೆ ಅವರಿಗೆ ಸಹಕಾರ ನೀಡಿದ್ದೇವೆ. ಖೇರಾ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿಯ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಕ್ಕೆ ಬಿಜೆಪಿಯು ಖೇರಾ ಅವರನ್ನು ಬಂಧಿಸುವಂತೆ ಒತ್ತಾಯಿಸಿತ್ತು. ಈ ಕುರಿತಂತೆ ಅಸ್ಸಾಂನಲ್ಲಿ ದೂರು ದಾಖಲಾಗಿತ್ತು.

ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿ ಮೋದಿ ಹೆಸರನ್ನು ಲೇವಡಿ ಮಾಡಿದ್ದರು. ನರಸಿಂಹರಾವ್‌ ಜೆಪಿಸಿ (ಜಂಟಿ ಸಂಸದೀಯ ಸಮಿತಿ) ರಚಿಸಬಹುದಾದರೇ, ವಾಜಪೇಯಿ ಜೆಪಿಸಿ ರಚಿಸಬಹುದಾದರೆ, ನರೇಂದ್ರ ಗೌತಮ್ ದಾಸ್– ಕ್ಷಮಿಸಿ, ದಾಮೋದರ್ ದಾಸ್ ಮೋದಿಗೆ ಜೆಪಿಸಿ ರಚಿಸಲು ಏನು ಸಮಸ್ಯೆ ಎಂದು ಕೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.