ಆತ್ಮಹತ್ಯೆ
Credit: iStock Photo
ವಯನಾಡ್: ಇಲ್ಲಿನ ಜಿಲ್ಲಾ ಕಾಂಗ್ರೆಸ್ ನಾಯಕ ಎನ್.ಎಂ.ವಿಜಯನ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಐ.ಸಿ.ಬಾಲಕೃಷ್ಣನ್ ಮತ್ತು ಇತರ ಮೂವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯನ್ ಆತ್ಮಹತ್ಯೆಗೆ ಶಾಸಕ ಬಾಲಕೃಷ್ಣನ್ ಮತ್ತು ಇತರ ಮೂವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ವಿಜಯನ್ ಅವರು ಬರೆದ ಆತ್ಮಹತ್ಯೆ ಪತ್ರದಲ್ಲಿ ಕಾಂಗ್ರೆಸ್ ಶಾಸಕ ಬಾಲಕೃಷ್ಣನ್, ಸಹಕಾರಿ ಬ್ಯಾಂಕ್ ಅಧ್ಯಕ್ಷ ಎನ್.ಡಿ.ಅಪ್ಪಚ್ಚನ್ ಸೇರಿದಂತೆ ಇತರೆ ಇಬ್ಬರ ಹೆಸರನ್ನು ಅವರ ಉಲ್ಲೇಖಿಸಿದ್ದರು. ಆ ಪತ್ರದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ವಿಜಯನ್, ಅವರ ಪುತ್ರ ಜಿಜೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹಣಕಾಸು ಅವ್ಯವಹಾರ ಸಂಬಂಧ ಈ ಆತ್ಮಹತ್ಯೆ ಪ್ರಕರಣ ನಡೆದಿದೆ ಎಂದು ಸಿಪಿಐ(ಎಂ) ಮುಖಂಡರು ಹೇಳಿದ್ದಾರೆ.
ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ವಿಜಯನ್ ಮತ್ತು ಅವರ ಪುತ್ರ ಹಣ ಸಂಗ್ರಹಿಸಿದ್ದರು ಎಂಬ ಆರೋಪಗಳು ಕೇಳಿಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.