
ಪಿಟಿಐ
ನವದೆಹಲಿ: ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷಗಳು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ್ದು, ತಲಾ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.
‘ಕಾಂಗ್ರೆಸ್ ಪಕ್ಷವು ಉಧಂಪುರ, ಜಮ್ಮು ಮತ್ತು ಲಡಾಖ್ ಕ್ಷೇತ್ರಗಳಲ್ಲಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಅನಂತನಾಗ್, ಶ್ರೀನಗರ ಮತ್ತು ಬಾರಾಮಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ’ ಎಂದು ಎನ್‌ಸಿ ಮುಖಂಡ ಒಮರ್ ಅಬ್ದುಲ್ಲಾ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್ ಸೀಟು ಹಂಚಿಕೆ ಸಮಿತಿ ಸದಸ್ಯ ಸಲ್ಮಾನ್ ಖುರ್ಷಿದ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.