ADVERTISEMENT

‘ಸಂವಿಧಾನ ಉಳಿಸಿ’ ರ‍್ಯಾಲಿ ಮುಂದೂಡಿದ ಕಾಂಗ್ರೆಸ್‌

​ಪ್ರಜಾವಾಣಿ ವಾರ್ತೆ
Published 7 ಮೇ 2025, 14:42 IST
Last Updated 7 ಮೇ 2025, 14:42 IST
<div class="paragraphs"><p>ಕಾಂಗ್ರೆಸ್‌ ಪಕ್ಷದ ಧ್ವಜ</p></div>

ಕಾಂಗ್ರೆಸ್‌ ಪಕ್ಷದ ಧ್ವಜ

   

ನವದೆಹಲಿ (ಪಿಟಿಐ): ಸಶಸ್ತ್ರ ಪಡೆಗಳ ಕಾರ್ಯಾಚರಣೆ ಬೆಂಬಲಿಸಿ ‘ಸಂವಿಧಾನ ಉಳಿಸಿ’ ರ‍್ಯಾಲಿ ಸೇರಿದಂತೆ ಕಾಂಗ್ರೆಸ್‌ ಪಕ್ಷ ನಿಗದಿಪಡಿಸಿದ್ದ ಎಲ್ಲ ಪಕ್ಷದ ಕಾರ್ಯಕ್ರಮಗಳಿಗೆ ತಾತ್ಕಾಲಿಕ ವಿರಾಮ ನೀಡಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲೂಸಿ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ‘ಎಕ್ಸ್‌’ನಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.