ADVERTISEMENT

ನಾಮಪತ್ರ ಸಲ್ಲಿಸುವಾಗ ನನಗಿರುವ ಬೆಂಬಲ ನೀವೇ ನೋಡಲಿದ್ದೀರಿ: ತರೂರ್

ಪಿಟಿಐ
Published 26 ಸೆಪ್ಟೆಂಬರ್ 2022, 9:09 IST
Last Updated 26 ಸೆಪ್ಟೆಂಬರ್ 2022, 9:09 IST
ಶಶಿ ತರೂರ್
ಶಶಿ ತರೂರ್   

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ತಮ್ಮ ಪ್ರಯತ್ನಕ್ಕೆ ದೇಶದೆಲ್ಲೆಡೆಯ ಪಕ್ಷದ ಕಾರ್ಯಕರ್ತರ ಬೆಂಬಲವಿದೆ ಎಂದು ಸಂಸದ ಶಶಿ ತರೂರ್ ಸೋಮವಾರ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಹ ಸ್ಪರ್ಧಿಸುವ ಸಾಧ್ಯತೆಯಿದೆ.

ಕೇರಳದಲ್ಲಿ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಶಶಿ ತರೂರ್ ಚರ್ಚೆ ನಡೆಸಿದ್ದಾರೆ.

ADVERTISEMENT

ನಾನು ನಾಮಪತ್ರ ಸಲ್ಲಿಸುವಾಗ ಸಿಗುವ ಬೆಂಬಲವನ್ನು ನೀವೇ ನೋಡಲಿದ್ದೀರಿ. ಬಹುತೇಕ ರಾಜ್ಯಗಳಿಂದ ಪಕ್ಷದ ಕಾರ್ಯಕರ್ತರಿಂದ ಬೆಂಬಲ ಇದ್ದುದ್ದರಿಂದ ಕಣಕ್ಕಿಳಿದಿದ್ದೇನೆ. ದೇಶದ ವಿವಿಧ ಭಾಗದ ಜನರು ನನ್ನಲ್ಲಿ ಕಣಕ್ಕಿಳಿಯಲು ವಿನಂತಿಸಿದ್ದಾರೆ ಎಂದು ತರೂರ್ ತಮ್ಮ ಉಮೇದುವಾರಿಕೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ. ಈ ಕುರಿತು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

ಸೆಪ್ಟೆಂಬರ್ 30ರಂದು ಶಶಿ ತರೂರ್ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ. 19ರಂದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.