ADVERTISEMENT

ದಿಗ್ವಿಜಯ್ ಸಿಂಗ್ ರಾಜೀನಾಮೆ ನಕಲಿ ಪತ್ರ; ಎಫ್‌ಐಆರ್‌ ದಾಖಲು

ಪಿಟಿಐ
Published 16 ಅಕ್ಟೋಬರ್ 2023, 14:33 IST
Last Updated 16 ಅಕ್ಟೋಬರ್ 2023, 14:33 IST
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್   

ಭೋಪಾಲ್‌ : ಮಧ್ಯಪ್ರದೇಶ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಬಿಂಬಿಸುವ ನಕಲಿ ಪತ್ರ ರಚಿಸಿದ ಅಪರಿಚಿತನ ವಿರುದ್ಧ ಭಾನುವಾರ ರಾತ್ರಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಸೈಬರ್‌ ಪೊಲೀಸರು ತಿಳಿಸಿದ್ದಾರೆ.

ಚುನಾವಣೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತಾವು ಸೂಚಿಸಿರುವ ಅಭ್ಯರ್ಥಿಗಳ ಹೆಸರನ್ನು ಪರಿಗಣಿಸದ ಕಾರಣ ದಿಗ್ವಿಜಯ್‌ ಸಿಂಗ್‌ ಅವರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಪತ್ರ ಬರೆಯಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. 

ಪತ್ರ ಬರೆದವರನ್ನು ಪತ್ತೆ ಮಾಡಲು ಪ್ರಯತ್ನ ನಡೆಸಲಾಗುತ್ತಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 469 (ವ್ಯಕ್ತಿಯ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ನಕಲು) ಮತ್ತು 501ರ (ಮಾನಹಾನಿಕರ ವಸ್ತುವನ್ನು ಅಚ್ಚು ಮಾಡುವುದು ಅಥವಾ ಚಿತ್ರಿಸುವುದು) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸೈಬರ್‌ ಕ್ರೈಂ ಎಸಿಪಿ ಸುಜೀತ್‌ ತಿವಾರಿ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ADVERTISEMENT

‘ಪತ್ರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದು ರಾಜ್ಯದ ಬಿಜೆಪಿ ವಕ್ತಾರ ಪಂಕಜ್‌ ಚತುರ್ವೇದಿ ‘ಎಕ್ಸ್‌’ನಲ್ಲಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.