ADVERTISEMENT

ತನಿಖಾ ಸಂಸ್ಥೆಗಳಿಗೆ ಕಾಂಗ್ರೆಸ್‌ನಿಂದ ಬೆದರಿಕೆ: ಬಿಜೆಪಿ

ಪಿಟಿಐ
Published 9 ಡಿಸೆಂಬರ್ 2018, 20:45 IST
Last Updated 9 ಡಿಸೆಂಬರ್ 2018, 20:45 IST

ನವದೆಹಲಿ: ತನಿಖಾ ಸಂಸ್ಥೆಗಳಿಗೆ ಕಾಂಗ್ರೆಸ್‌ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಯಾವುದೇ ಕುಟುಂಬದ ಹಿನ್ನೆಲೆ ಹೊಂದಿದ್ದರೂ, ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಪಾದಿಸಿದೆ.

‘ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾವ ರಾಬರ್ಟ್‌ ವಾದ್ರಾ ಅವರೊಂದಿಗೆ ಸಂಬಂಧ ಹೊಂದಿರುವವರ ವಿರುದ್ಧ ತನಿಖಾ ಸಂಸ್ಥೆಗಳು ನಡೆಸಿದ ದಾಳಿ ನಂತರ ಈ ಸಂಸ್ಥೆಗಳಿಗೆ ಕಾಂಗ್ರೆಸ್‌ ಬೆದರಿಕೆ ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಈ ಮೂಲಕ ಜನರಿಗೆ ನೀಡಿದ ಭರವಸೆ ಈಡೇರಿಸಿದ್ದಾರೆ’ ಎಂದು ಬಿಜೆಪಿ ವಕ್ತಾರ ಶಾನವಾಜ್‌ ಹುಸೇನ್‌ ಭಾನುವಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT