ADVERTISEMENT

ಅಕ್ಕಿ ಬೆಲೆ, ಜಿಎಸ್‌ಟಿ ವಿರುದ್ಧ ರಾಮಲೀಲಾ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಧರಣಿ

ಪಿಟಿಐ
Published 3 ಸೆಪ್ಟೆಂಬರ್ 2022, 12:49 IST
Last Updated 3 ಸೆಪ್ಟೆಂಬರ್ 2022, 12:49 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ:ಬೆಲೆ ಏರಿಕೆ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಳ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಪ್ರತಿಭಟನಾ ರ್‍ಯಾಲಿ ನಡೆಸಲಿದೆ.

ಕಾಂಗ್ರೆಸ್‌ ನಾಯಕ‌ ರಾಹುಲ್ ಗಾಂಧಿ ಮತ್ತು ಪಕ್ಷದ ಹಲವು ನಾಯಕರು ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿ, ಹರಿಯಾಣ, ಉತ್ತರ ಪ್ರದೇಶ ಹಾಗೂದೇಶದ ಇತರೆ ಭಾಗಗಳ ಪಕ್ಷದ ಕಾರ್ಯಕರ್ತರು ಭಾಗವಹಿಸುವರು.

ಸೆ.7 ರಂದು ಪ್ರಾರಂಭವಾಗುವ ಕನ್ಯಾಕುಮಾರಿ–ಕಾಶ್ಮೀರದವರೆಗಿನ 3,500 ಕಿಮೀ ‘ಭಾರತ ಒಗ್ಗೂಡಿಸು’ ಯಾತ್ರೆ ಪೂರ್ವಭಾವಿಯಾಗಿ ಈ ರ್‍ಯಾಲಿ ಆಯೋಜಿಸಲಾಗಿದೆ. ಅಕ್ಕಿ ಮತ್ತು ನಿರುದ್ಯೋಗದ ಸಮಸ್ಯೆಗಳ ಬಗ್ಗೆರಾಹುಲ್ ಗಾಂಧಿ ಧ್ವನಿ ಎತ್ತಲಿದ್ದಾರೆ.

ADVERTISEMENT

‘ಭಾರತ್ ಜೋಡೋ ಯಾತ್ರೆ’ ಕಾಂಗ್ರೆಸ್ ಪಕ್ಷದ ಅತಿದೊಡ್ಡ ಜನಸಂಪರ್ಕ ಕಾರ್ಯಕ್ರಮವಾಗಿದ್ದು, ಪಕ್ಷದ ನಾಯಕರು ತಳಮಟ್ಟದಲ್ಲಿ ಸಾಮಾನ್ಯ ಜನರನ್ನು ತಲುಪಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶದಲ್ಲಿದ್ದು, ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ವಿದೇಶದಲ್ಲಿರುವ ರಾಹುಲ್ ಗಾಂಧಿ ಅವರು ಶನಿವಾರದ ವೇಳೆಗೆ ಹಿಂತಿರುಗಲಿದ್ದು, ಎರಡೂ ಮೆಗಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.