ನವದೆಹಲಿ: ಸೆಪ್ಟೆಂಬರ್‌ನಲ್ಲಿ ನೀಟ್–ಜೆಇಇ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಆ.28ರಂದು ದೇಶದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಬುಧವಾರ ಘೋಷಿಸಿದೆ.
‘ಕೇಂದ್ರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಗಳ ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಕಚೇರಿಗಳ ಮುಂದೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವರು’ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.