ADVERTISEMENT

ಭ್ರಷ್ಟಾಚಾರವನ್ನು ಕ್ರಾಂತಿಯಾಗಿ ಪರಿವರ್ತಿಸಲು ಕಾಂಗ್ರೆಸ್ ಯತ್ನ: ಸಚಿವ ನಖ್ವಿ

ಐಎನ್‌ಎಕ್ಸ್‌ ಪ್ರಕರಣ: ಮುಂದುವರಿದ ಕಾಂಗ್ರೆಸ್–ಬಿಜೆಪಿ ವಾಕ್ಸಮರ

ಏಜೆನ್ಸೀಸ್
Published 22 ಆಗಸ್ಟ್ 2019, 9:27 IST
Last Updated 22 ಆಗಸ್ಟ್ 2019, 9:27 IST
   

ನವದೆಹಲಿ:ಭ್ರಷ್ಟಾಚಾರವನ್ನು ಕ್ರಾಂತಿಯಾಗಿ ಪರಿವರ್ತಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರ ಟೀಕಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಣ ವಾಕ್ಸಮರ ತಾರಕಕ್ಕೇರಿದೆ.

ಸಿಬಿಐ, ಜಾರಿ ನಿರ್ದೇಶನಾಲಯಗಳನ್ನು (ಇ.ಡಿ) ಬಿಜೆಪಿ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ.ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಇತರ ಆರೋಪಿಗಳನ್ನು ಬಂದಿಸಲಾಗಿಲ್ಲ. ಆದರೆ ಚಿದಂಬರಂ ಅವರನ್ನು ಏಕಪಕ್ಷೀಯವಾಗಿ ಬಂಧಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ನಖ್ವಿ, ‘ಕಾಂಗ್ರೆಸ್ ಪಕ್ಷವು ನಕಾರಾತ್ಮಕ ಮನೋಭಾವ ಹೊಂದಿದೆ. ಅವರು ಭ್ರಷ್ಟಾಚಾರವನ್ನು ಕ್ರಾಂತಿಯನ್ನಾಗಿ ಮಾಡಿದ್ದಾರೆ. ಈವರೆಗೆ, ಕ್ರಾಂತಿ ಎಂಬುದು ಭ್ರಷ್ಟಾಚಾರಕ್ಕೆ ವಿರುದ್ಧವಾಗಿತ್ತು. ಈಗ ಭ್ರಷ್ಟಾಚಾರದ ಪರ ಕ್ರಾಂತಿ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.