ಬಂಧನ
ಪ್ರಾತಿನಿಧಿಕ ಚಿತ್ರ
ಚಂಡೀಗಢ: ಹರಿಯಾಣದ ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಕುರಿತು ತನಿಖೆಗೆ ಪೊಲೀಸರು ಎಸ್‌ಐಟಿ ರಚನೆ ಮಾಡಿತ್ತು. ತನಿಖೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಿದ್ದೇವೆ ಎಂದು ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಫೆ.27ರಂದು ಹಿಮಾನಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೆ, ಪಕ್ಷದ ಕೆಲಸದಲ್ಲಿ ತೊಡಗಿರುವುದಾಗಿ ಹೇಳಿದ್ದಳು. ಆದರೆ ಕೆಲ ಹೊತ್ತಿನ ಬಳಿಕ ಅವಳ ಫೋನ್ ಸ್ವಿಚ್ ಆಫ್ ಆಗಿದೆ’ ಎಂದು ತಾಯಿ ತಿಳಿಸಿದ್ದಾರೆ.
ಕೊಲೆಗಾರನ ಬಂಧನವಾಗುವವರೆಗೆ ಹಿಮಾನಿ ಅವರ ಮೃತದೇಹದ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬ ಪಟ್ಟುಹಿಡಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.