ADVERTISEMENT

ಉತ್ತರ ಪ್ರದೇಶ-ರಾಜ್ಯದ ಎಲ್ಲಾ ಜಿಲ್ಲಾ ಸಮಿತಿಗಳನ್ನು ವಿಸರ್ಜಿಸಿದ ಕಾಂಗ್ರೆಸ್

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡದವರ ವಿರುದ್ಧ ಶಿಸ್ತು ಕ್ರಮ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 14:39 IST
Last Updated 24 ಜೂನ್ 2019, 14:39 IST
   

ಉತ್ತರಪ್ರದೇಶ: ಕಾಂಗ್ರೆಸ್‌‌ನ ಹಿರಿಯ ಮುಖಂಡ ಅಜಯ್ ಕುಮಾರ್ ಲಲ್ಲು ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಉತ್ತರಪ್ರದೇಶ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾದಿತ್ಯ ಸಿಂದ್ಯಾ ಹಾಗೂ ಪ್ರಿಯಾಂಕಾ ಗಾಂಧಿ ಅವರು ಸಲ್ಲಿಸಿದ ಪ್ರಸ್ತಾವವನ್ನು ಎಐಸಿಸಿ ಜಾರಿಗೊಳಿಸಿದೆ ಎಂದು ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಯನ್ನು ತಕ್ಷಣವೇ ವಿಸರ್ಜಿಸಿರುವ ಉತ್ತರಪ್ರದೇಶ ಕಾಂಗ್ರೆಸ್ ಸಮಿತಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡದ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಿದೆ.

ADVERTISEMENT

ಅಲ್ಲದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಅಶಿಸ್ತು ತೋರಿದ ಕುರಿತು ಬಂದಿರುವ ದೂರುಗಳ ವಿಚಾರಣೆ ನಡೆಸಲು ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದೆ.ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಪಕ್ಷ ಹೀನಾಯ ಸೋಲು ಅನುಭವಿಸಿದ ನಂತರ ಒಂದರ ಹಿಂದೆ ಒಂದರಂತೆ ಕಾಂಗ್ರೆಸ್‌‌ನಲ್ಲಿ ಬದಲಾವಣೆ ತರಲು ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.