ADVERTISEMENT

ಕೇರಳ: ಕಾಂಗ್ರೆಸ್‌ ಕಾರ್ಯಕರ್ತರು–ಪೊಲೀಸರ ನಡುವೆ ಘರ್ಷಣೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 14:46 IST
Last Updated 10 ಜೂನ್ 2022, 14:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮತ್ತು ಜಲಫಿರಂಗಿ ಪ್ರಯೋಗಿಸಿದರು.

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಪಿಣರಾಯಿ ಹಾಗೂ ಅವರ ಕುಟುಂಬದವರ ಹೆಸರನ್ನು ಆರೋಪಿ ಸ್ವಪ್ನ ಸುರೇಶ್‌ ಹೇಳಿದ್ದ ಹಿನ್ನೆಲೆಯಲ್ಲಿ ನಿರಂತರ ಮೂರು ದಿನಗಳಿಂದ ಕಾಂಗ್ರೆಸ್‌ ಹಾಗೂ ಯುವ ಕಾಂಗ್ರೆಸ್‌ನ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ತಿರುವಂತನಪುರ, ಕೋಯಿಕ್ಕೋಡ್‌, ಮಲಪ್ಪುರಂ, ಕಣ್ಣೂರು ಹಾಗೂ ಇತರೆಡೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾಥಾವನ್ನು ಹಮ್ಮಿಕೊಂಡಿದ್ದರು.

ಜಾಥಾ ವೇಳೆ ಕೊಲ್ಲಂನಲ್ಲಿ ಪೊಲೀಸರು ಹಾಗೂ ಕಾಂಗ್ರೆಸ್ಸಿಗರ ಮಧ್ಯೆ ಪರಿಸ್ಥಿತಿ ಉದ್ವಿಗ್ನಗೊಂಡು ಘರ್ಷಣೆ ನಡೆದಿದ್ದು, ಲಾಠಿ ಚಾರ್ಜ್‌ ವೇಳೆ ಇಬ್ಬರು ಪೊಲೀಸರು ಹಾಗೂ ಅನೇಕ ಕಾರ್ಯಕರ್ತರಿಗೆ ಗಾಯಗಳಾಗಿವೆ.

ADVERTISEMENT

ಕೊಟ್ಟಾಯಂನಲ್ಲೂ ಸಹ ಪ್ರತಿಭಟನಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.