
ಪಿಟಿಐ
ಕೊಚ್ಚಿ: ‘ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಕುರಿತು ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ರಾಜ್ಯ ಗೃಹ ಇಲಾಖೆ ನಿಯಂತ್ರಿಸುತ್ತಿದೆ’ ಎಂದು ವಿರೋಧ ಪಕ್ಷ ಕಾಂಗ್ರೆಸ್ ಸೋಮವಾರ ಆರೋಪಿಸಿದೆ.
‘ಎಸ್‌ಐಟಿಯು ಪ್ರಕರಣದ ನಿಜವಾದ ಆರೋಪಿಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಎಸ್‌ಐಟಿ ತನಿಖೆಯ ಪ್ರಗತಿ ಬಗ್ಗೆ ಕೇರಳ ಹೈಕೋರ್ಟ್ ಸಹ ಕಳವಳ ವ್ಯಕ್ತಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಹೇಳಿದರು.
‘ಈ ಪ್ರಕರಣದಲ್ಲಿ ಮತ್ತಷ್ಟು ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯವೇ ಹೇಳಿದೆ. ಅವರನ್ನು ಇನ್ನೂ ಬಂಧಿಸಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ, ಇದು ಸಂಘಟಿತ ಕಳ್ಳತನ ಪ್ರಕರಣವಾಗಿದೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.