ಪ್ರಧಾನಿ ಮೋದಿ
(ಪಿಟಿಐ ಚಿತ್ರ)
ಹೈದರಾಬಾದ್: ತೆಲಂಗಾಣದ ನಾರಾಯಣಪೇಟ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ದೇಶವನ್ನು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ವಿಭಜಿಸುತ್ತಿದೆ. ಧರ್ಮಾಧಾರಿತ ಮೀಸಲಾತಿಯು ಸಂವಿಧಾನ ವಿರೋಧಿ ಎಂಬುದು ಕಾಂಗ್ರೆಸ್‌ಗೆ ತಿಳಿದಿದೆ. ಇದನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರೂ ವಿರೋಧಿಸಿದ್ದರು ಎಂದರು.
ಕಾಂಗ್ರೆಸ್‌ಗೆ ಹಿಂದೂಗಳ ಬಗ್ಗೆ ಅಥವಾ ಈ ದೇಶದ ಬಗ್ಗೆ ಕಾಳಜಿಯಿಲ್ಲ. ಅದು ಹಿಂದೂಗಳ ವಿರುದ್ಧವಾಗಿದೆ ಮತ್ತು ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲು ಬಯಸುತ್ತದೆ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.