ADVERTISEMENT

ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ

ಪಿಟಿಐ
Published 6 ಮೇ 2024, 10:38 IST
Last Updated 6 ಮೇ 2024, 10:38 IST
ಜೆ. ಪಿ. ನಡ್ಡಾ
ಜೆ. ಪಿ. ನಡ್ಡಾ   

ಹೈದರಾಬಾದ್‌: ‘ರಾಮ ವಿರೋಧಿ, ಸನಾತನ ಧರ್ಮ ವಿರೋಧಿ ಕಾಂಗ್ರೆಸ್‌, ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ತೆಲಂಗಾಣದ ಪೆದ್ದಪಲ್ಲಿಯಲ್ಲಿ ನಡೆದ ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿ ಮಾತನಾಡಿದ ನಡ್ಡಾ, ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸುವಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸುಮ್ಮನಿದ್ದರು’ ಎಂದು ಕಿಡಿಕಾರಿದರು.

ಅಧಿಕಾರಕ್ಕೆ ಬಂದರೆ ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಕೆಟಲ್‌ ಅನ್ನು ಕಂಡು ಮಡಕೆ ಕಪ್ಪು ಎಂದಿತಂತೆ’ ಎಂದು ಪರೋಕ್ಷವಾಗಿ ಕುಟುಕಿದರು.

ADVERTISEMENT

‘2004ರಲ್ಲಿ ಅವಿಭಜಿತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದಲಿತರ, ಆದಿವಾಸಿಗಳ, ಹಿಂದುಳಿದ ವರ್ಗದವರ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಿತ್ತು. ಕರ್ನಾಟಕದಲ್ಲಿಯೂ ಒಬಿಸಿಗಳ ಮೀಸಲಾತಿಯನ್ನು ಮೊಟಕುಗೊಳಿಸಿ ಮುಸ್ಲಿಮರಿಗೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಅದನ್ನು ತೆಗೆದುಹಾಕಿತು’ ಎಂದು ಹೇಳಿದರು.

ಇದೇ ವೇಳೆ ಬಿಆರ್‌ಎಸ್‌, ಎಐಎಂಐಎಂ ಪಕ್ಷಗಳ ವಿರುದ್ಧವೂ ನಡ್ಡಾ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.