ADVERTISEMENT

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು: ಬಿಜೆಪಿ ವಿರುದ್ಧ ಶಿವಸೇನಾ ಕಿಡಿ

ಪಿಟಿಐ
Published 14 ಜುಲೈ 2020, 7:22 IST
Last Updated 14 ಜುಲೈ 2020, 7:22 IST
.
.   

ಜೈಪುರ: ರಾಜಸ್ಥಾನದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಬಿಜೆಪಿ ವಿರುದ್ಧ ಶಿವಸೇನಾ ಕಿಡಿಕಾರಿದೆ.

ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಕಾಂಗ್ರೆಸ್‌ ಆಡಳಿತ ನಡೆಸುವ ರಾಜ್ಯಗಳಲ್ಲಿನ ಶಾಸಕರನ್ನು ಖರೀದಿಸಲು ಉತ್ತೇಜನ ನೀಡುತ್ತಿದೆ ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಬರೆಯಲಾಗಿದೆ.

ಪ್ರಸ್ತುತ ಸಂಕಷ್ಟದ ಸಮಯದಲ್ಲಿ ರಾಜಕೀಯ ಅಗತ್ಯವಿರಲಿಲ್ಲ. ಕೊರೊನಾ ವೈರಸ್‌ ಮತ್ತು ಭಾರತ–ಚೀನಾ ಗಡಿ ಬಿಕ್ಕಟ್ಟಿಗೆ ಪರಿಹಾರಗಳನ್ನು ರೂಪಿಸುವ ಬದಲು ಕಾಂಗ್ರೆಸ್‌ ಪಕ್ಷದ ಆಂತರಿಕ ವಿಷಯದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುತ್ತಿದೆ. ಮರುಭೂಮಿ ರಾಜ್ಯದಲ್ಲಿ ರಾಜಕೀಯ ದುಸ್ಸಾಹಸ ಮಾಡುತ್ತಿರುವ ಬಿಜೆಪಿ, ಯಾವ ರೀತಿಯ ಸಾಧನೆ ಮಾಡುತ್ತಿದೆ. ಇಂತಹ ಕ್ರಮಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಮರುಭೂಮಿ ರೀತಿ ಮಾಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ADVERTISEMENT

ಇಡೀ ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಕೆಲವು ರಾಜ್ಯಗಲ್ಲಿಯಾದರೂ ಆಡಳಿತ ನಡೆಸಲು ವಿರೋಧ ಪಕ್ಷಗಳಿಗೆ ಅವಕಾಶ ಕಲ್ಪಿಸಬೇಕು. ಇದು ಪ್ರಜಾಪ್ರಭುತ್ವಕ್ಕೂ ಒಳ್ಳೆಯದು ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.