ADVERTISEMENT

ತೃತೀಯ ಲಿಂಗಿ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

ಪಿಟಿಐ
Published 8 ಜನವರಿ 2019, 19:38 IST
Last Updated 8 ಜನವರಿ 2019, 19:38 IST
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜತೆ ಅಪ್ಸರಾ ರೆಡ್ಡಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜತೆ ಅಪ್ಸರಾ ರೆಡ್ಡಿ   

ನವದೆಹಲಿ: ಕಾಂಗ್ರೆಸ್‌ನ ಮಹಿಳಾ ಘಟಕದ ರಾಷ್ಟ್ರೀಯ ಪ್ರಧಾ ನ ಕಾರ್ಯದರ್ಶಿಯಾಗಿ ತೃತೀಯ ಲಿಂಗಿ ಕಾರ್ಯಕರ್ತೆ ಅಪ್ಸರಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

133 ವರ್ಷಗಳ ಇತಿಹಾಸವಿರುವ ಪಕ್ಷದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರನ್ನು ರಾಷ್ಟ್ರಮಟ್ಟದ ಪದಾಧಿಕಾರಿಯನ್ನಾಗಿ ಅಧ್ಯಕ್ಷ ರಾಹುಲ್‌ ಗಾಂಧಿ ನೇಮಿಸಿದ್ದಾರೆ. ಪತ್ರಕರ್ತೆ ಅಪ್ಸರಾ ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಂಡಿದ್ದಾರೆ.

ಕಾಂಗ್ರೆಸ್‌ ಸೇರುವ ಮೊದಲು ಇವರು ಬಿಜೆಪಿ ಮತ್ತು ಎಐಎಡಿಎಂಕೆ ಜೊತೆ ಗುರುತಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.