
ಪ್ರಜಾವಾಣಿ ವಾರ್ತೆ
ನವದೆಹಲಿ: ಎಐಸಿಸಿ ಕಾರ್ಯದರ್ಶಿಗಳಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹಾಗೂ ಯುವ ಮುಖಂಡ ನಿವೇದಿತ್ ಆಳ್ವ ಅವರನ್ನು ಮಂಗಳವಾರ ನೇಮಿಸಲಾಗಿದೆ.
ಶ್ರೀನಿವಾಸ್ ಅವರಿಗೆ ಗುಜರಾತ್ ಹಾಗೂ ಆಳ್ವ ಅವರಿಗೆ ತಮಿಳುನಾಡು ಹೊಣೆ ವಹಿಸಲಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶ್ರೀನಿವಾಸ್ ಕಳೆದ ವರ್ಷದವರೆಗೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.