ADVERTISEMENT

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ಕ್ಕೆ ಚುನಾವಣೆ

ಕೇಂದ್ರೀಯ ಚುನಾವಣಾ ಸಮಿತಿ ಪ್ರಸ್ತಾವ

ಪಿಟಿಐ
Published 22 ಜನವರಿ 2021, 8:13 IST
Last Updated 22 ಜನವರಿ 2021, 8:13 IST
ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೆ.ಸಿ. ವೇಣುಗೋಪಾಲ್‌, ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ– ಸಂಗ್ರಹ ಚಿತ್ರ
ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೆ.ಸಿ. ವೇಣುಗೋಪಾಲ್‌, ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ– ಸಂಗ್ರಹ ಚಿತ್ರ   

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.

ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್‌ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.