ADVERTISEMENT

ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ನಿಧನ

ಪಿಟಿಐ
Published 31 ಆಗಸ್ಟ್ 2022, 13:22 IST
Last Updated 31 ಆಗಸ್ಟ್ 2022, 13:22 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ಅವರು ಶನಿವಾರ ಇಟಲಿಯಲ್ಲಿರುವ ನಿವಾಸದಲ್ಲಿ ಮೃತಪಟ್ಟಿದ್ದಾರೆ ಮತ್ತು ಅಂತ್ಯಕ್ರಿಯೆಯನ್ನು ಭಾನುವಾರ ನಡೆಸಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಸೋನಿಯಾ ಗಾಂಧಿ, ಅವರ ಮಗ ರಾಹುಲ್‌ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

'ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ಅವರು ಇಟಲಿಯಲ್ಲಿರುವ ತಮ್ಮ ನಿವಾಸದಲ್ಲಿ ಆಗಸ್ಟ್‌ 27, ಶನಿವಾರ ನಿಧನರಾಗಿದ್ದಾರೆ. ಮರುದಿನ ಅಂತ್ಯಕ್ರಿಯೆ ನಡೆಸಲಾಗಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ADVERTISEMENT

90ರ ವಯಸ್ಸಿನ ತಾಯಿಯನ್ನು ಸೋನಿಯಾ ಗಾಂಧಿ ಅವರು ಆಗಸ್ಟ್‌ 23ರಂದು ಇಟಲಿಗೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.