ADVERTISEMENT

ಹೀನಾಯ ಸೋಲು: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ 3 ಕಾಂಗ್ರೆಸ್ ನಾಯಕರು

​ಪ್ರಜಾವಾಣಿ ವಾರ್ತೆ
Published 27 ಮೇ 2019, 12:52 IST
Last Updated 27 ಮೇ 2019, 12:52 IST
ಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಝಕಾರ್
ಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಝಕಾರ್   

ರಾಂಚಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಪರಾಭವಗೊಂಡಿರುವುದರ ನೈತಿಕ ಹೊಣೆ ಹೊತ್ತು ಮೂರು ರಾಜ್ಯಗಳ ಕಾಂಗ್ರೆಸ್ ನಾಯಕರು ಸೋಮವಾರ ರಾಜೀನಾಮೆ ನೀಡಿದ್ದಾರೆ.

ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್, ಒಡಿಶಾದ ನಿರಂಜನ್ ಪಟ್ನಾಯಿಕ್ ಮತ್ತು ಮಹಾರಾಷ್ಟ್ರದ ಅಶೋಕ್ ಚೌಹಾಣ್ ರಾಜೀನಾಮೆ ನೀಡಿದ್ದರು.ಇದೀಗ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಝಕಾರ್, ರಾಹುಲ್ ಗಾಂಧಿಯವರಿಗೆ ಇಮೇಲ್ ಮೂಲಕ ರಾಜೀನಾಮೆ ಕಳಿಸಿದ್ದಾರೆ. ಪಂಜಾಬ್‌ನ ಗುರುದಾಸ್‌ಪುರದಲ್ಲಿ ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಗೆಲುವು ಸಾಧಿಸಿದ್ದರು.ಇಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷವಾದ ಎಸ್‌ಎಡಿ ತಲಾ ಎರಡು ಸೀಟು ಗೆದ್ದುಕೊಂಡಿದೆ.

ಜಾರ್ಖಂಡ್‌ನಲ್ಲಿ 14 ಸೀಟುಗಳ ಪೈಕಿ 1 ಸೀಟು ಗೆದ್ದುಕೊಂಡಿದೆ ಕಾಂಗ್ರೆಸ್.ಇಲ್ಲಿಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.ಇಲ್ಲಿಯವರೆಗೆ ಕಾಂಗ್ರೆಸ್‌ನ 6 ನಾಯಕರು ರಾಜೀನಾಮೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.