ADVERTISEMENT

ವಂಶಪರಂಪರೆ ರಾಜಕೀಯದಿಂದ ಕಾಂಗ್ರೆಸ್‌ ಪತನದತ್ತ: ಅಮಿತ್‌ ಶಾ

ಪಿಟಿಐ
Published 28 ಫೆಬ್ರುವರಿ 2021, 18:49 IST
Last Updated 28 ಫೆಬ್ರುವರಿ 2021, 18:49 IST
ಅಮಿತ್‌ ಶಾ
ಅಮಿತ್‌ ಶಾ   

ಕಾರೈಕಲ್‌/ಚೆನ್ನೈ : ಕಾಂಗ್ರೆಸ್‌ನ ಹಿರಿಯ ಮುಖಂಡರೆಲ್ಲ ಬಿಜೆಪಿ ಸೇರುತ್ತಿದ್ದಾರೆ. ವಂಶಾಡಳಿತ ಮತ್ತು ಒಂದು ಕುಟುಂಬದಿಂದಾಗಿ ಕಾಂಗ್ರೆಸ್‌ ಪಕ್ಷವು‍ಪುದುಚೇರಿಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕುಸಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಹೇಳಿದ್ದಾರೆ.

ತಮಿಳುನಾಡಿನ ವಿಲ್ಲುಪುರಂನಲ್ಲಿಯೂ ಶಾ ಅವರು ವಂಶಾಡಳಿತದ ವಿಚಾರವನ್ನೇ ಪ್ರಸ್ತಾಪಿಸಿದರು. ‘ಡಿಎಂಕೆ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಕುಟುಂಬಗಳ ಬಗ್ಗೆಯಷ್ಟೇ ಯೋಚಿಸುತ್ತಾರೆ. ಮಗ ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡುವುದಷ್ಟೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬೇಕಾಗಿದೆ. ಮಗ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್‌ ಬಯಕೆ’ ಎಂದು ಶಾ ಹೇಳಿದ್ದಾರೆ.

ಮೀನುಗಾರಿಕಗೆ ಪ್ರತ್ಯೇಕ ಸಚಿವಾಲಯ ಇಲ್ಲ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಹೇಳಿದ್ದನ್ನೂ ಶಾ ಅವರು ಲೇವಡಿ ಮಾಡಿದರು. ‘ಕೆಲ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ರಾಹುಲ್ ಅವರು ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಏಕಿಲ್ಲ ಎಂದು ಪ್ರಶ್ನಿಸಿದ್ದರು. ರಾಹುಲ್‌ ಅವರೇ, ನೀವು ಆಗ ರಜೆಯಲ್ಲಿದ್ದೀರಿ. ಮೋದಿ ಅವರು 2019ರಲ್ಲಿಯೇ ಎರಡು ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಿದ್ದಾರೆ. ಅದು ನಿಮ್ಮ ಅರಿವಿಗೆ ಬಂದಿಲ್ಲ’ ಎಂದರು.

ತಮಿಳು ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗದ್ದಕ್ಕೆ ಶಾ ಅವರು ವಿಷಾದವನ್ನೂ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.