ಅಮಿತ್ ಶಾ
(ಪಿಟಿಐ ಚಿತ್ರ)
ನವದೆಹಲಿ: ದೇಶದ ಸಂವಿಧಾನವನ್ನು ಕಾಂಗ್ರೆಸ್ ಒಂದು ಕುಟುಂಬದ 'ಖಾಸಗಿ ಆಸ್ತಿ'ಯಾಗಿ ಪರಿಗಣಿಸಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
'ಭಾರತದ ಸಂವಿಧಾನದ 75 ವರ್ಷಗಳ ವೈಭವಯುತ ಪ್ರಯಾಣ' ಕುರಿತು ಎರಡು ದಿನಗಳ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಕಳೆದ 75 ವರ್ಷಗಳಲ್ಲಿ ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ಮೋಸ ಮಾಡಿದೆ. ನೆಹರೂ-ಗಾಂಧಿ ಕುಟುಂಬಕ್ಕೆ ಪಕ್ಷ ಮತ್ತು ಸಂವಿಧಾನ ಖಾಸಗಿ ಆಸ್ತಿ ಇದ್ದಂತೆ ಎಂದು ಸಂಸತ್ತಿನ ಅನುಮೋದನೆಯಿಲ್ಲದೆ 35ಎ ವಿಧಿಯನ್ನು ಸೇರಿಸಿರುವುದನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ.
ಧರ್ಮದ ಆಧಾರದಲ್ಲಿ ಮೀಸಲಾತಿ ಹಂಚಿಕೆ ಮಾಡಲಾಗುವುದಿಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಕಾಂಗ್ರೆಸ್ ಒಬಿಸಿಗಳ ಪರವಾಗಿಲ್ಲ. ಮೀಸಲಾತಿ ಹೆಚ್ಚಿಸುವ ಮೂಲಕ ಅದನ್ನು ಮುಸ್ಲಿಮರಿಗೆ ಹಂಚಲು ಬಯಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಬಿಜೆಪಿಯ ಒಬ್ಬ ಸಂಸದ ಇದ್ದರೂ ಕೂಡಾ ಧರ್ಮದ ಆಧಾರದ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಎಂದಿಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿಲ್ಲ ಎಂದು ಅವರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.