ADVERTISEMENT

ಜಾತಿ ಜನಗಣತಿಗೆ ಸಂಬಂಧಿಸಿದ ವಿಷಯಗಳ ಅಧ್ಯಯನಕ್ಕೆ ಸಮಿತಿ ರಚಿಸಿದ ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಸೆಪ್ಟೆಂಬರ್ 2021, 15:17 IST
Last Updated 3 ಸೆಪ್ಟೆಂಬರ್ 2021, 15:17 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ಜಾತಿ ಆಧಾರಿತ ಜನಗಣತಿಗೆ ಸಂಬಂಧಿಸಿದ ವಿಷಯಗಳ ಅಧ್ಯಯನ ನಡೆಸಲು ಏಳು ಸದಸ್ಯರ ಸಮಿತಿಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ರಚಿಸಿದ್ದಾರೆ.

ಕಾಂಗ್ರೆಸ್‌ ನಾಯಕರಾದ ವೀರಪ್ಪ ಮೊಯ್ಲಿ, ಅಭಿಷೇಕ್ ಸಿಂಘ್ವಿ, ಸಲ್ಮಾನ್ ಖುರ್ಷಿದ್, ಮೋಹನ್ ಪ್ರಕಾಶ್, ಆರ್.ಪಿ.ಎನ್. ಸಿಂಗ್, ಪಿ.ಎಲ್. ಪುನಿಯಾ ಮತ್ತು ಮತ್ತು ಕುಲದೀಪ್ ಬಿಷ್ಣೋಯಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

ವೀರಪ್ಪ ಮೊಯ್ಲಿ ಅವರು ಸಮಿತಿಯ ಸಂಚಾಲಕರಾಗಿ ನೇಮಕವಾಗಿದ್ದಾರೆ.

ADVERTISEMENT

ಜಾತಿ ಆಧಾರಿತ ಜನಗಣತಿಯ ಬಗ್ಗೆ ಕೇಂದ್ರ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ತಿಳಿಸಿತ್ತು.

ಜಾತಿ ಜನಗಣತಿಗೆ ಎಲ್ಲ ಕಡೆಯಿಂದಲೂ ಬೇಡಿಕೆ ಇದೆ ಎಂದು ಕಾಂಗ್ರೆಸ್‌ ಪ್ರತಿಪಾದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.