ADVERTISEMENT

ಕಾಂಗ್ರೆಸ್ ಪ್ರಣಾಳಿಕೆ, ಬಿಜೆಪಿ ರ‍್ಯಾಲಿ, ಸುಪ್ರೀಂನಲ್ಲಿ ವಿವಿಪ್ಯಾಟ್ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 5:43 IST
Last Updated 25 ಮಾರ್ಚ್ 2019, 5:43 IST
   

ನವದೆಹಲಿ: ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಗೆ ಅಂತಿಮ ರೂಪ ನೀಡಲೆಂದು ಕೇಂದ್ರೀಯ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಸೋಮವಾರ ಸಭೆ ಸೇರಲಿದೆ. ಕಾಂಗ್ರೆಸ್‌ನಲ್ಲಿ ಉನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿಯ ಸಭೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರಾದ ಭಾಗವಾಗಿ ಉತ್ತರ ಪ್ರದೇಶದಲ್ಲಿಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ‘ಡ್ರೀಮ್‌ಗರ್ಲ್‌’ ಹೇಮಾಮಾಲಿನಿ ಪರವಾಗಿ ಮಥುರಾದಲ್ಲಿ ರ‍್ಯಾಲಿ ಇಂದು ನಡೆಸಲಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ವಿವಿಪ್ಯಾಟ್‌ ಸ್ಲಿಪ್‌ಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ. ಇವಿಎಂಗಳಲ್ಲಿ ಚಲಾವಣೆಯಾಗಿರುವ ಮತಗಳಲ್ಲಿ ಶೇ50ರಷ್ಟನ್ನು ವಿವಿಪ್ಯಾಟ್‌ಗಳೊಂದಿಗೆ ಹೋಲಿಸಬೇಕು ಎಂದು ಪ್ರತಿಪಕ್ಷಗಳು ಮನವಿ ಮಾಡಿವೆ.ಲೋಕಸಭೆ ಚುನಾವಣೆಯು ಏ.21ರಿಂದ ಆರಂಭವಾಗಲಿದೆ. ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.