ADVERTISEMENT

ರಾಹುಲ್ ನಾಯಕತ್ವ ಕುರಿತು ತುಟಿ ಬಿಚ್ಚದ ಮುಖಂಡರು, ಮುಗಿದ ಸಿಡಬ್ಲ್ಯುಸಿ ಸಭೆ

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಮೇ 2019, 10:45 IST
Last Updated 25 ಮೇ 2019, 10:45 IST
ಕಾರ್ಯಕಾರಿ ಸಮಿತಿ ಸಭೆ ಮುಗಿಸಿ ಹೊರಬರುತ್ತಿರುವ ರಾಹುಲ್ ಗಾಂಧಿ
ಕಾರ್ಯಕಾರಿ ಸಮಿತಿ ಸಭೆ ಮುಗಿಸಿ ಹೊರಬರುತ್ತಿರುವ ರಾಹುಲ್ ಗಾಂಧಿ   

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಕುರಿತುಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಗಿದಿದ್ದು ರಾಹುಲ್ ಗಾಂಧಿ ನಾಯಕತ್ವ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ಕಾಂಗ್ರೆಸ್ ಮುಖಂಡರಾದ ಅಂಬಿಕಾಸೋನಿ ಹೇಳಿದ್ದಾರೆ.

ನವದೆಹಲಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗವಹಿಸಿದ್ದರು.

ಕಾಂಗ್ರೆಸ್ ಪಕ್ಷ ರಾಷ್ಟ್ರದಲ್ಲಿ ಬಿಜೆಪಿ ವಿರುದ್ಧ ಸೋತು ಕೇವಲ 51 ಸ್ಥಾನಗಳನ್ನು ಗೆಲ್ಲಲು ಕಾರಣಗಳೇನು, ಮುಂದೆ ಯಾರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಎಂಬುದೂ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಶನಿವಾರ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

ADVERTISEMENT

ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಯಾವವಿಷಯಗಳು ಚರ್ಚೆಯಾದವು ಎಂಬುದರ ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಅಂಬಿಕಾ ಸೋನಿ ಅಂತಹ ಯಾವುದೇ ಪ್ರಸ್ತಾವ ಇಲ್ಲ ಎಂದಷ್ಟೇ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.