ಎ. ರೇವಂತ್ ರೆಡ್ಡಿ
ಹೈದರಾಬಾದ್: ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳಲು ಸರ್ವಪಕ್ಷ ಸಭೆ ಕರೆಯುವುದಾಗಿ ತೆಲಂಗಾಣ ಕಾಂಗ್ರೆಸ್ ಹೇಳಿದೆ.
ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಅವರು, ಎನ್‌ಡಿಎ ಸರ್ಕಾರವು ಕ್ಷೇತ್ರಗಳ ಪುನರ್ ವಿಂಗಡಣೆಯ ಮೂಲಕ ದಕ್ಷಿಣ ರಾಜ್ಯಗಳಿಗೆ ಹಾನಿ ಮಾಡಲು ಉದ್ದೇಶಿಸಿದೆ ಎಂದು ಆರೋಪಿಸಿದರು.
ಉತ್ತರ ಭಾರತದಲ್ಲಿ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗುವಂತೆ ದಕ್ಷಿಣ ಭಾರತದಲ್ಲಿಯೂ ಸಹ ಅನುಪಾತದ ಆಧಾರದ ಮೇಲೆ ಹೆಚ್ಚಾಗಬೇಕು ಎಂದರು. ಆದರೆ ಯಾವಾಗ ಸಭೆ ನಡೆಸಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡಿಲ್ಲ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇದೇ ವಿಚಾರಕ್ಕೆ ಸರ್ವಪಕ್ಷ ಸಭೆ ನಡೆಸಿದ ಒಂದು ದಿನದ ನಂತರ ತೆಲಂಗಾಣ ಸರ್ಕಾರ ಸಭೆ ಕರೆಯಲು ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.