ADVERTISEMENT

ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್‌

8 ಸ್ಥಾನಗಳಲ್ಲಿ ಕಾಂಗ್ರೆಸ್‌ಗೆ ಜಯ, ಬಿಜೆಪಿಗೆ2, ಆಪ್‌ಗೆ 1

​ಪ್ರಜಾವಾಣಿ ವಾರ್ತೆ
Published 23 ಮೇ 2019, 19:45 IST
Last Updated 23 ಮೇ 2019, 19:45 IST
   

ಚಂಡೀಗಡ: ಪಂಜಾಬ್‌ನಲ್ಲಿ ಮೋದಿ ಅಲೆ ಬಿಜೆಪಿಗೆ ವರವಾಗಿಲ್ಲ. ರಾಜ್ಯದಲ್ಲಿನ 13 ಲೋಕಸಭಾ ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ತನ್ನ ಬಲವನ್ನು ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಶಿರೋಮನಿ ಅಕಾಲಿ ದಳ (ಎಸ್‌ಎಡಿ) ಮತ್ತು ಬಿಜೆಪಿ ಕೇವಲ ನಾಲ್ಕು ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ. 2014ರಲ್ಲಿ ಅಚ್ಚರಿ ರೀತಿಯಲ್ಲಿ ನಾಲ್ಕು ಸ್ಥಾನಗಳಲ್ಲಿ ಜಯಗಳಿಸಿದ್ದ ಆಮ್‌ ಆದ್ಮಿ ಪಕ್ಷ ಕೇವಲ ಸಂಗ್ರೂರ್‌ ಕ್ಷೇತ್ರದಲ್ಲಿ ಜಯ ಸಾಧಿಸಿದೆ. ಪಂಜಾಬ್‌ ರಾಜ್ಯ ಘಟಕದ ಅಧ್ಯಕ್ಷ ಭಗವಂತ್‌ ಮಾನ್‌ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಫಿರೋಜಪುರ ಮತ್ತು ಬಥಿಂದಾ ಕ್ಷೇತ್ರಗಳಲ್ಲಿ ಶಿರೋಮನಿ ಅಕಾಲಿ ದಳ ಜಯ ಸಾಧಿಸಿದೆ. ಎಸ್‌ಎಡಿ ಮುಖ್ಯಸ್ಥ ಸುಖಬೀರ್‌ ಸಿಂಗ್‌ 1.98 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಹೊಶಿಯಾರಪುರ ಮತ್ತು ಗುರುದಾಸಪುರ ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಿದೆ.

ADVERTISEMENT

ಬಿಜೆಪಿ ಅಭ್ಯರ್ಥಿ ಹಾಗೂ ಚಲನಚಿತ್ರ ನಟ ಸನ್ನಿ ಡಿಯೋಲ್‌ ಗುರುದಾಸಪುರ ಕ್ಷೇತ್ರದಲ್ಲಿ ಸುಮಾರು 82 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸುನೀಲ್‌ ಜಾಖಡ್‌ ವಿರುದ್ಧ ಸನ್ನಿ ಡಿಯೋಲ್‌ ಸ್ಪರ್ಧಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಎಸ್‌ಎಡಿ–ಬಿಜೆಪಿ ಮೈತ್ರಿಕೂಟ 6 ಸ್ಥಾನಗಳಲ್ಲಿ ಜಯಗಳಿಸಿತ್ತು. ಆಮ್‌ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್‌ ತಲಾ ನಾಲ್ಕು ಮತ್ತು ಮೂರು ಸ್ಥಾನಗಳಲ್ಲಿ ಜಯಗಳಿಸಿದ್ದವು.

***

‘ಚುನಾವಣೆಗಳಲ್ಲಿ ಗೆಲ್ಲುವುದು,ಸೋಲುವುದು ಸಾಮಾನ್ಯ. ರಾಹುಲ್‌ ಗಾಂಧಿ ಅತ್ಯುತ್ತಮ ನಾಯಕ. ಪಂಜಾಬ್‌ನಲ್ಲಿ ಹಿಂದೂತ್ವದ ಯಾವುದೇ ಪರಿಣಾಮ ಬೀರಿಲ್ಲ. ಭಾರತದ ಜಾತ್ಯತೀತ ಹಿನ್ನಲೆಯನ್ನು ನಾಶಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸಬಾರದು

-ಅಮರಿಂದರ್‌ ಸಿಂಗ್‌,ಪಂಜಾಬ್‌ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.